Skip to content
The Believer's Library

Biblica® Open Kannada Contemporary Version 2022

Romans 2 OKCV

Show OKCV only
Verse × ×
1 So you have no excuse, whoever you are, when you judge another—in judging them you condemn yourself, since you do the same things. ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.
2 Now we know that our Father's judgment rightly falls on those who do such things. ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.
3 Do you think, whoever judges others for such things while doing them yourself, that you'll escape our Father's judgment? ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?
4 Or do you despise the riches of his kindness and restraint and patience, not realizing that our Father's kindness is meant to lead you to repentance? ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?
5 But because of your hard, unrepentant heart, you are storing up wrath for yourself, for the day of wrath when our Father's righteous judgment will be revealed. ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.
6 He will repay each person according to what they have done. ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”
7 To those who through persistent good work seek glory, honor, and immortality, he will give eternal life. ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.
8 But those who are self-seeking, reject the truth, and follow wickedness face wrath and rage. ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.
9 Trouble and distress for everyone who does evil—the Jew first, then the Greek, ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.
10 but glory, honor, and peace for all who do good—Jew first, then Greek too. ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.
11 For our Father shows no favoritism. ದೇವರಲ್ಲಿ ಪಕ್ಷಪಾತವಿಲ್ಲ.
12 Sinners without the law also perish without it; sinners under the law will be judged by it. ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.
13 For not those who hear the law are righteous before our Father, but those who obey it will be justified. ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು.
14 Indeed, when Gentiles, who do not have the law, do by nature what the law requires, the law is at work within them, even though they do not have the law. ನಿಯಮವಿಲ್ಲದ ಯೆಹೂದ್ಯರಲ್ಲದವರು ಸ್ವಾಭಾವಿಕವಾಗಿ ನಿಯಮದಲ್ಲಿ ಹೇಳಿದಂತೆ ನಡೆಯುವಾಗ ಅವರಿಗೆ ನಿಯಮವಿಲ್ಲದಿದ್ದರೂ ಅವರ ಅಂತರಂಗವೇ ನಿಯಮವಾಗಿದೆ.
15 They show the law's work written on their hearts, their conscience bearing witness, and their conflicting thoughts accusing or defending them. ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ.
16 This happens on the day our Father judges everyone's secrets through Jesus Christ—so my gospel says. ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.
17 But if you call yourself a Jew, rely on the law, and boast in our Father, ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ
18 if you know our Father's will and approve what is excellent because you are instructed by the law, ದೇವರ ಚಿತ್ತವನ್ನು ಬಲ್ಲವನೂ ನಿಯಮದಿಂದ ಉಪದೇಶವನ್ನು ಹೊಂದಿ ಯಾವುದು ಉತ್ತಮವಾದದ್ದೆಂದು ಅನುಮೋದಿಸುವವನೂ ಆಗಿದ್ದೀ.
19 if you're convinced you are a guide for the blind, a light for those in darkness, ನಿನಗೆ ನಿಯಮದ ಜ್ಞಾನ ಮತ್ತು ಸತ್ಯವು ಇರುವುದರಿಂದ ನೀನು ಕುರುಡರಿಗೆ ಮಾರ್ಗದರ್ಶಿಯೂ ಕತ್ತಲೆಯಲ್ಲಿರುವವರಿಗೆ ಬೆಳಕೂ
20 a corrector of the foolish, teacher of the immature, holding in the law the shape of knowledge and truth. ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?
21 You teach others—do you not teach yourself? You preach against stealing—do you steal? ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೋ. ಕದಿಯಬಾರದೆಂದು ಸಾರುವ ನೀನು ಕದಿಯುತ್ತೀಯೋ?
22 You who tell others not to commit adultery—do you commit it? You who detest idols—do you rob temples? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?
23 You who boast in the law, do you dishonor our Father by breaking the law? ನಿಯಮದ ಬಗ್ಗೆ ಹೆಚ್ಚಳ ಪಡುವ ನೀನು ನಿಯಮವನ್ನು ಮೀರಿ ನಡೆದು ದೇವರನ್ನು ಅವಮಾನ ಪಡಿಸುತ್ತೀಯೋ?
24 As it is written: "Our Father's name is blasphemed among the nations because of you." ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”
25 Circumcision helps if you keep the law; break it, and your circumcision becomes being uncircumcised. ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.
26 So if the uncircumcised keep the law's requirements, won't their uncircumcision be counted as circumcision? ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?
27 The physically uncircumcised who keep the law will judge you who, with the letter and circumcision, break the law. ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?
28 For being a Jew isn't merely about the outside, nor circumcision merely about the body. ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
29 Rather, one is a Jew inwardly, circumcision being of the heart, by the Spirit, not the written code; that one's praise is not from people but from our Father. ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]