Skip to content
The Believer's Library

Biblica® Open Kannada Contemporary Version 2022

Romans 4 OKCV

Show OKCV only
Verse × ×
1 What then should we say that Abraham, our physical forefather, has found? ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?
2 For if Abraham was justified by works, he has something to boast about—but not before our Father. ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.
3 For what does Scripture say? Abraham believed our Father, and it was counted to him as righteousness. ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.
4 To the one who works, wages aren't credited as a gift but as what's owed. ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.
5 But to one who does not work, but trusts him who justifies the wicked, his faith is counted as righteousness. ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.
6 As David also speaks of the blessing of the person our Father credits righteousness to, apart from works: ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:
7 "Blessed are those whose lawless deeds are forgiven, and whose sins are covered; “ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.
8 blessed is the one whose sin our Father will never count against him." ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.”
9 Is this blessing only for the circumcised, or also the uncircumcised? We say Abraham's faith was credited as righteousness. ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.
10 How then was it credited? While he was circumcised, or uncircumcised? Not while circumcised, but while uncircumcised. ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!
11 He received circumcision as a sign, a seal of the righteousness he had by faith while still uncircumcised, so he would be father of all who believe though uncircumcised, with righteousness credited to them too, ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.
12 and father of the circumcised who are not only circumcised but also walk in the footsteps of the faith our father Abraham had while uncircumcised. ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.
13 For the promise to Abraham and his offspring that he would inherit the world did not come through the law, but through faith's righteousness. ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.
14 For if those who live by the law are heirs, faith is emptied and the promise nullified. ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.
15 Law brings wrath; where there is no law, there is no violation. ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.
16 So it comes by faith, to be by grace, guaranteeing the promise to all the offspring—not only those tied to the law but also those who share Abraham's faith, father of us all, ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
17 as it is written, "I have made you father of many nations"—before our Father, in whom he believed, who gives life to the dead and calls things that do not exist into being. “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.
18 Against hope, he believed in hope, becoming father of many nations, as he'd been told: "So will your offspring be." ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.
19 Not weak in faith, he considered his own body already as good as dead—he was about one hundred—and Sarah's womb lifeless. ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.
20 He did not doubt our Father's promise in lack of faith, but was strengthened in faith, giving glory to our Father, ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.
21 fully convinced that what our Father had promised he was also able to do. ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.
22 That is why "it was credited to him as righteousness." ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.”
23 But the words "it was credited to him" were written not for his sake alone, ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ,
24 and also for us who will be credited with it—those trusting the one who raised our Lord Jesus from the dead, ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.
25 who was delivered over for our sins and raised to make us right with our Father. ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]