Skip to content
The Believer's Library

Biblica® Open Kannada Contemporary Version 2022

Romans 5 OKCV

Show OKCV only
Verse × ×
1 So, since we are made right by faith, we have peace with our Father through our Lord Jesus Christ. ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.
2 Through whom we've gained access by faith into this grace we stand in, and we rejoice in hope of our Father's glory. ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.
3 Not only that, but we also boast in our suffering, since suffering produces endurance, ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ
4 and endurance produces character, and character produces hope. ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.
5 Hope doesn't put us to shame, because our Father's love has been poured into our hearts through the Holy Spirit given to us. ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.
6 While we were still weak, at the right time Christ died for the wicked. ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.
7 Rarely would anyone die for a righteous person, though for a good person someone might even dare to die. ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.
8 But our Father shows his own love for us: while we were still sinners, Christ died for us. ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
9 Much more then, now made right by his blood, we will be saved through him from the wrath. ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?
10 If, as enemies, we were reconciled to our Father through the death of his Son, how much more, now reconciled, will his life save us? ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?
11 Not only that—we also rejoice in our Father through our Lord Jesus Christ, through whom we have now received reconciliation. ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.
12 So, as sin entered the world through one man, and death through sin, death spread to everyone, since all sinned. ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.
13 Before the law, sin was already in the world; but sin isn't counted where there's no law. ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.
14 Still, death ruled from Adam to Moses, even over those whose sin didn't match Adam's wrongdoing—Adam foreshadows the one to come. ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ.
15 But the gift is not like the sin: if many died through one man's sin, much more has our Father's grace and the gift by the grace of the one man Jesus Christ overflowed to many. ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?
16 And the gift is not like the result of that one man's sin: judgment from one sin brought condemnation, but the gift from many sins brought justification. ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ.
17 For if death reigned through that one man because of one trespass, how much more will those receiving grace's overflow and the gift of righteousness reign in life through the one man, Jesus Christ. ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!
18 So then, as one trespass condemned everyone, one righteous act brings everyone justification and life. ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.
19 As one man's disobedience made the many sinners, so one man's obedience will make the many righteous. ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.
20 Now the law came in so that the trespass might increase, but where sin increased, grace abounded all the more, ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.
21 so that as sin reigned in death, grace might reign through righteousness to eternal life, through Jesus Christ our Lord. ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]