Skip to content
The Believer's Library

Biblica® Open Kannada Contemporary Version 2022

Romans 7 OKCV

Show OKCV only
Verse × ×
1 Or don't you know, brothers—I'm speaking to people who know the law—that the law rules over a person only while he lives? ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.
2 A married woman is bound by law to her husband while he lives; if he dies, she is free from the law of the husband. ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ.
3 While her husband lives, she's called an adulterous woman if she becomes another man's wife; but if he dies, she's free from that law—not an adulterous woman if she marries another. ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ.
4 So, my brothers and sisters, you too were put to death to the law through Christ's body, to belong to another—the one raised from the dead—so we might bear fruit for our Father. ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.
5 For when we were in the flesh, sin's passions, stirred by the law, worked in our bodies to produce fruit for death. ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.
6 But now we're released from the law, dead to what held us bound, so we serve in the new way of the Spirit, not the old way of the written code. ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.
7 What then should we say? Is the law sin? Never! Yet I wouldn't have known sin except through the law—nor would I have known craving, had the law not said, "Do not crave what isn't yours." ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.
8 But sin, seizing an opening through the commandment, produced in me every covetous craving. For apart from law, sin is dead. ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.
9 I once lived apart from law; but when the commandment came, sin revived, and I died. ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.
10 I found that the very commandment that was meant to bring life actually brought death. ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು.
11 For sin, seizing the opportunity through the commandment, deceived me, and through the commandment killed me. ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.
12 So then, the law is holy, and the commandment is holy and righteous and good. ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ.
13 Did the good, then, bring death to me? Absolutely not! Rather, sin—to be exposed as sin—produced death in me through the good, so that through the commandment sin might become extremely sinful. ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.
14 For we know the law is spiritual, but I am fleshly, sold under sin. ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.
15 I don't understand what I do; for I don't do what I want, but what I hate I do. ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ.
16 If I do what I don't want, I agree the law is good. ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ.
17 So now, it's no longer I who do it, but sin living in me. ಹೀಗಿರಲಾಗಿ ನಾನು ಬಯಸದಿರುವುದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಸಿರುವ ಪಾಪವೇ ಅದನ್ನು ಮಾಡುತ್ತದೆ.
18 For I know nothing good lives in me—that is, in my flesh. For I want to do good but can't carry it out. ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.
19 For I don't do the good I want, but the evil I don't want—that I keep doing. ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ.
20 Now if I do what I don't want, it's no longer I doing it, but sin living in me doing it. ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡುತ್ತಿರುವುದಾದರೆ ಅದನ್ನು ಮಾಡಿದವನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತಿದೆ.
21 So I find this law: when I want to do good, evil lies close at hand. ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.
22 For in my inner being I delight in the law of our Father. ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.
23 But I see another law in my body, warring against the law of my mind and taking me captive to the law of sin at work in my body. ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.
24 What a wretched man I am! Who will rescue me from this body of death? ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು?
25 Thanks to our Father through Jesus Christ our Lord! So then, I myself serve the law of our Father with my mind, but with my flesh, the law of sin. ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]