Skip to content
The Believer's Library

Biblica® Open Kannada Contemporary Version 2022

Romans 8 OKCV

Show OKCV only
Verse × ×
1 There is therefore now no condemnation for those who are in Christ Jesus. ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.
2 In Christ Jesus, the Spirit's law of life freed you from sin and death's law. ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.
3 What the law couldn't do, weakened by the flesh, our Father did: sending his own Son in the likeness of sinful flesh, as a sin offering, he condemned sin in the flesh, ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.
4 so the law's righteous requirement would be fulfilled in us, who walk not according to the flesh but according to the Spirit. ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.
5 Those who live by the flesh focus on what the flesh wants; but those who live by the Spirit, on what the Spirit wants. ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.
6 For a mind fixed on the flesh is death; a mind fixed on the Spirit is life and peace. ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.
7 For the flesh-ruled mind is hostile to our Father; it doesn't submit to our Father's law—indeed it cannot. ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
8 Those ruled by the sinful nature cannot please our Father. ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.
9 But you are not in the flesh but in the Spirit, if indeed the Spirit of our Father lives in you. Whoever lacks the Spirit of Christ does not belong to him. ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.
10 But if Christ is in you, the body is dead from sin, but the Spirit is life from righteousness. ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.
11 So if the Spirit of our Father who raised Jesus from the dead lives in you, he who raised Christ from the dead will also make your mortal bodies alive through his Spirit living in you. ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.
12 So then, brothers and sisters, we are debtors—but not to the flesh, to live by it. ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.
13 For if you live by the flesh, you will die; but if by the Spirit you put to death the body's deeds, you will live. ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.
14 For all who are led by the Spirit of our Father are children of our Father. ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.
15 You did not receive a spirit of slavery, to fall back into fear, but received the Spirit of sonship, by whom we cry, "Abba! Father!" ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.
16 The Spirit himself bears witness with our spirit that we are children of our Father. ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
17 If children, then heirs—heirs of our Father, co-heirs with Christ, if we suffer with him, so we may also be glorified with him. ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
18 I count this era's suffering as nothing next to the glory to be revealed to us. ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.
19 For the creation waits with eager longing for the children of our Father to be revealed. ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.
20 For creation was subjected to frustration—not by choice, but by him who subjected it—in hope, ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.
21 that creation itself will be freed from its slavery to decay, into the freedom of the glory of our Father's children. ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.
22 For we know the whole creation has groaned together in labor pains until now. ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.
23 And not only the creation, but we too—who hold the Spirit's firstfruits—groan within ourselves, waiting eagerly for our full rights as sons to be restored, the redemption of our bodies. ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.
24 In this hope we were saved. Hope seen isn't hope—who hopes for what he already sees? ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?
25 But if we hope for what we do not see, we wait for it with patience. ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.
26 So too the Spirit helps our weakness: we don't know what to pray for as we should, but the Spirit himself pleads for us with wordless groans. ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
27 He who searches hearts knows the Spirit's mind, since the Spirit intercedes for the saints according to our Father's will. ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.
28 We know all things work together for good for those who love our Father, who are called according to his purpose. ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.
29 Those he foreknew, he also predestined to be shaped to his Son's image, so he would be firstborn among many brothers and sisters. ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.
30 Those he predestined, he also called; those he called, he also justified; those he justified, he also glorified. ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.
31 So what do we say to these things? If our Father is for us, who can be against us? ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?
32 He didn't spare his own Son but gave him up for us all—won't he also freely give us everything with him? ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?
33 Who should bring any charge against our Father's chosen ones? Our Father is the one who justifies. ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.
34 Who condemns? Christ Jesus—who died, more than that, was raised, who is at our Father's right hand, who indeed intercedes for us. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.
35 Who can separate us from Christ's love? Suffering, hardship, persecution, famine, nakedness, danger, sword? ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.
36 As it is written: "For your sake we are killed all day long; we are counted as sheep to be slaughtered." ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”
37 No, in all these things we are more than conquerors through him who loved us. ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.
38 For I am convinced neither death nor life, neither angels nor rulers, neither present nor future, nor powers, ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,
39 neither height nor depth, nor anything else in all creation, can separate us from the love of our Father in Christ Jesus our Lord. ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]