Skip to content
The Believer's Library

Biblica® Open Kannada Contemporary Version 2022

Romans 9 OKCV

Show OKCV only
Verse × ×
1 I speak truth in Christ, not lying—my conscience testifies with me in the Holy Spirit, ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.
2 that I have great sorrow and unceasing anguish in my heart. ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.
3 I could wish myself cursed, cut off from Christ, for my brothers and sisters, my own people by blood. ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.
4 They are Israelites: theirs the full rights as sons, the glory, the covenants, the lawgiving, the worship, the promises. ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.
5 The ancestors are theirs; from them, by human descent, comes the Christ, who is God over all, blessed forever. Amen. ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.
6 This doesn't mean our Father's word has failed, for not all descended from Israel are Israel. ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.
7 Not all Abraham's offspring are his children; rather, "Your offspring will be named through Isaac." ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.
8 That is, the children of the flesh are not children of our Father, but children of the promise count as offspring. ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.
9 For the promise says: "At this time next year I will come, and Sarah will have a son." ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,” ಅದು ವಾಗ್ದಾನದ ಮಾತಾಗಿತ್ತು.
10 Not only that, but Rebekah too conceived by one man, our father Isaac, ಇದು ಮಾತ್ರವಲ್ಲದೆ, ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನ ಮೂಲಕ ಅವಳಿಜವಳಿ ಮಕ್ಕಳನ್ನು ಪಡೆದಳು.
11 though not yet born, having done nothing good or bad—so our Father's purpose by election might stand, ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.
12 not from works, but from him who calls, she was told: "the older will serve the younger." ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,” ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು.
13 As it is written, "Jacob I loved, but Esau I hated." ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.
14 What should we say then? Is there injustice with our Father? By no means! ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.
15 For he tells Moses, "I will have mercy on whom I have mercy, and I will have compassion on whom I have compassion." ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”
16 So then it depends not on human will or exertion, but on our Father, who has mercy. ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.
17 For the Scripture says to Pharaoh: "I raised you up for this very reason, to show my power in you, and to have my name proclaimed in all the earth." ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.
18 So then he has mercy on whomever he wills, and he hardens whomever he wills. ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.
19 So you'll ask me, "Why does he still find fault? Who resists his will?" ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.
20 But who are you, mere human, to argue with our Father? Does the molded say to its molder, "Why did you make me like this?" ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?
21 Does the potter not have authority over the clay, making from one lump a vessel for honor, another for dishonor? ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?
22 What if our Father, wanting to show his wrath and make known his power, patiently endured vessels of wrath prepared for destruction, ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?
23 to reveal his glory's riches for vessels of mercy he prepared beforehand for glory, ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.
24 even us whom he has called, not from the Jews only but also from the Gentiles? ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?
25 As he says in Hosea, "I will call those not my children, my children, and her not beloved, beloved." ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”
26 "And in the very place where it was said to them, 'You are not my people,' there they will be called 'children of the living Father.'" ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,” ಎಂದು ದೇವರು ಹೇಳುತ್ತಾರೆ.
27 Isaiah cries out about Israel: "Though Israel's children number like sand of the sea, only a remnant will be saved, ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.
28 for our Father will carry out his sentence upon the earth, fully and without delay." ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”
29 And as Isaiah predicted: "Had the Father of heaven's armies not left us offspring, we'd have become like Sodom, made like Gomorrah." ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.
30 What then should we say? Gentiles not pursuing righteousness attained righteousness, righteousness by faith; ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.
31 but that Israel, who pursued a law of righteousness, did not reach that law. ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.
32 Why? Because they pursued it not through faith but as though through works. They stumbled on the stumbling stone, ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.
33 as it is written, "See, I am placing in Zion a stumbling stone, a rock that offends; whoever trusts him won't be put to shame." ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]