Skip to content
The Believer's Library

Biblica® Open Kannada Contemporary Version 2022

Ruth 2 OKCV

Show OKCV only
Verse × ×
1 Naomi had a relative through her husband, a prominent, wealthy man from Elimelech's clan, named Boaz. ನೊವೊಮಿಯ ಗಂಡ ಎಲೀಮೆಲೆಕನ ಗೋತ್ರದಲ್ಲಿ ಬೋವಜ ಎಂಬ ಹೆಸರುಳ್ಳ ಪ್ರಬಲ ಮತ್ತು ಧನವಂತನಾಗಿರುವ ಬಂಧುವಿದ್ದನು.
2 Ruth the Moabite said to Naomi, "Let me glean grain behind anyone who favors me." She said, "Go, my daughter." ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.
3 So she went out and gleaned behind the harvesters, and she happened to come to the field belonging to Boaz, of Elimelech's family. ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.
4 Just then Boaz came from Bethlehem, telling the harvesters, "May our Father be with you." "Our Father bless you," they replied. ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.
5 Then Boaz said to his foreman, "Whose young woman is this?" ಬೋವಜನು ಕೊಯ್ಯುವವರ ಮೇಲೆ ಮೇಲ್ವಿಚಾರಕನಾಗಿದ್ದ ತನ್ನ ಸೇವಕನಿಗೆ, “ಈ ಯುವತಿ ಯಾರು?” ಎಂದನು.
6 The foreman answered, "She's the young Moabite woman who returned with Naomi from Moab's country. ಅದಕ್ಕೆ ಆ ಮೇಲ್ವಿಚಾರಕನು, “ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಯುವತಿ.
7 She said, 'Please let me glean and gather among the sheaves behind the harvesters.' She came and has stayed from morning till now, resting only briefly in the shelter." ಇವಳು, ‘ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ನಡುವೆ ನಾನು ಹಕ್ಕಲಾರಿಸಿಕೊಳ್ಳುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೇಳಿಕೊಂಡಳು. ಸ್ವಲ್ಪ ಸಮಯ ನೆರಳಿನಲ್ಲಿ ವಿಶ್ರಮಿಸಿಕೊಂಡು, ಬೆಳಗಿನಿಂದ ಈವರೆಗೂ ಇಲ್ಲಿಯೇ ಇದ್ದಾಳೆ,” ಎಂದನು.
8 Boaz said to Ruth, "Listen, my daughter. Don't glean in another field or leave here; stay close to my young women. ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.
9 Watch the field they harvest and follow behind them. I've told the young men not to touch you. When thirsty, drink from the jars the young men filled." ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ. ಅವರ ಹಿಂದೆಯೇ ಹೋಗು, ಯಾರೂ ನಿನ್ನನ್ನು ಮುಟ್ಟದಹಾಗೆ ಅವರಿಗೆ ಆಜ್ಞಾಪಿಸಿದ್ದೇನೆ. ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ನನ್ನ ಸೇವಕರು ಸೇದಿಟ್ಟ ನೀರನ್ನು ಕುಡಿ,” ಎಂದನು.
10 She bowed facedown to the ground and asked him, "Why have I found favor in your eyes that you notice me, a foreigner?" ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.
11 Boaz answered, "I've heard all you did for your mother-in-law since your husband died—how you left your father, mother, and homeland to come to a people you didn't know before. ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.
12 May our Father repay your deed; may our Father, the God of Israel, under whose wings you've come for refuge, reward you fully." ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.
13 "May I find favor in your eyes, my lord," she said, "for you've comforted me and spoken kindly to your servant, though I'm not one of your servants." ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.
14 At mealtime Boaz said, "Come here, eat some bread, dip your piece in the wine vinegar." She sat beside the harvesters; he passed her roasted grain. She ate her fill and had some left. ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.
15 When she rose to glean, Boaz ordered his young men, "Let her glean even among the sheaves; don't shame her. ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವಜನು ತನ್ನ ಸೇವಕರಿಗೆ ಆಜ್ಞಾಪಿಸಿ, “ಇವಳು ಕೊಯ್ದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ಬೈಯಬೇಡಿರಿ.
16 Instead, pull stalks from the bundles for her and leave them for her to pick up, and don't correct her." ಅವಳು ಹಕ್ಕಲಾದುಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡುಗಳಲ್ಲಿ ಕೆಲವನ್ನು ಕೆಳಗೆ ಹಾಕಿರಿ. ಅವಳನ್ನು ಗದರಿಸಬೇಡಿರಿ,” ಎಂದನು.
17 She gleaned in the field till evening, then beat out what she'd gathered—about twenty quarts of barley. ಹಾಗೆಯೇ ಅವಳು ಸಾಯಂಕಾಲದವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಮೂವತ್ತು ಕಿಲೋಗ್ರಾಂ ಜವೆಗೋಧಿಯಾಗಿತ್ತು.
18 She carried it to town; her mother-in-law saw how much she'd gleaned. She also brought out and gave her what she'd saved after eating her fill. ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಬಂದಳು. ಅವಳು ಹಕ್ಕಲಾದುಕೊಂಡಿದ್ದನ್ನು ಅವಳ ಅತ್ತೆಯು ಕಂಡಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.
19 Her mother-in-law asked, "Where did you gather today? Where did you work? Blessed be the man who noticed you!" Ruth named whose field: "The man I worked with today is Boaz." ಆಗ ರೂತಳ ಅತ್ತೆಯು ಆಕೆಗೆ, “ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡೆ? ಎಲ್ಲಿ ಕೆಲಸಮಾಡಿದೆ? ನಿನ್ನನ್ನು ಪರಾಮರಿಸಿದವನಿಗೆ ಆಶೀರ್ವಾದವಾಗಲಿ,” ಎಂದಳು. ಅದಕ್ಕವಳು ತಾನು ಯಾರ ಹತ್ತಿರ ಕೆಲಸಮಾಡಿದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ, “ನಾನು ಈ ಹೊತ್ತು ಕೆಲಸ ಮಾಡಿದವನ ಹೆಸರು ಬೋವಜ,” ಎಂದು ಹೇಳಿದಳು.
20 Naomi told her daughter-in-law, "May our Father bless him, whose kindness hasn't left the living or the dead." She added, "He's a close relative, one of our redeemers." ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು.
21 Then Ruth the Moabite said, "He even told me, 'Stay with my workers until they finish all my harvest.'" ಅದಕ್ಕೆ ಮೋವಾಬ್ಯಳಾದ ರೂತಳು, “ಅವನು, ‘ನನ್ನ ಪೈರೆಲ್ಲಾ ಕೊಯ್ದು ತೀರುವವರೆಗೂ, ನೀನು ನನ್ನ ಕೆಲಸದವರ ಸಂಗಡ ಕೂಡಿಕೊಂಡಿರು’ ಎಂದು ನನಗೆ ಹೇಳಿದನು,” ಎಂದಳು.
22 Naomi told her daughter-in-law Ruth, "Good, my daughter—go out with his young women, so you won't be harmed in another field." ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿಗಳ ಸಂಗಡ ಹೊರಟುಹೋಗುವುದು ಒಳ್ಳೆಯದು,” ಎಂದಳು.
23 She stayed close to Boaz's young women, gleaning until the barley and wheat harvests ended, and lived with her mother-in-law. ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವವರೆಗೆ ಹಕ್ಕಲಾದುಕೊಳ್ಳುವುದಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿಕೊಂಡು ಹೋಗುತ್ತಿದ್ದಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]