Skip to content
The Believer's Library

Biblica® Open Kannada Contemporary Version 2022

Ruth 3 OKCV

Show OKCV only
Verse × ×
1 Then her mother-in-law Naomi said, "My daughter, shouldn't I seek a home for you, so it goes well for you? ಒಂದು ದಿನ ರೂತಳ ಅತ್ತೆ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ, ನಾನು ನಿನಗೆ ವಿಶ್ರಾಂತಿ ಸ್ಥಳ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?
2 Isn't Boaz, whose young women you were with, our relative? Tonight he winnows barley at the threshing floor. ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು.
3 Wash, perfume yourself, put on your cloak, and go down to the threshing floor. Don't reveal yourself to the man until he finishes eating and drinking. ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.
4 When he lies down, note the place; go uncover his feet and lie down—he'll tell you what to do." ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳಿದುಕೊಂಡು ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು,” ಎಂದಳು.
5 And Ruth said to her, "All that you say I will do." ಅದಕ್ಕೆ ರೂತಳು, “ನೀವು ನನಗೆ ಹೇಳಿದ್ದನ್ನೆಲ್ಲಾ ಮಾಡುವೆನು,” ಎಂದಳು.
6 So she went down to the threshing floor and did everything her mother-in-law had told her. ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು.
7 Boaz ate, drank, and felt good, then lay down at the end of the grain heap. She came secretly, uncovered his feet, and lay down. ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.
8 At midnight the man was startled, turned over, and there lay a woman at his feet! ಆದರೆ ಮಧ್ಯರಾತ್ರಿಯಲ್ಲಿ ಬೋವಜನು ಹೆದರಿ ತಿರುಗಿ ನೋಡಿದಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವುದನ್ನು ಕಂಡನು.
9 "Who are you?" he asked. "I am Ruth, your servant," she said. "Spread your cloak's corner over your servant, for you are a redeemer." ಆಗ ಅವನು, “ನೀನು ಯಾರು?” ಎಂದನು. ಅದಕ್ಕವಳು, “ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು,” ಎಂದಳು.
10 He said, "Blessed are you by our Father, my daughter. This last kindness is better than the first, since you didn't chase young men, poor or rich. ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.
11 Now, my daughter, don't be afraid. I'll do all you ask, for my whole town knows you're a worthy woman. ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.
12 Now it is true that I am a redeemer, yet there is a redeemer nearer than I. ಈಗ ನಾನು ನಿನ್ನ ವಿಮೋಚಿಸತಕ್ಕ ಸಮೀಪ ಬಂಧುವಾಗಿದ್ದೇನೆ ಎಂಬುದು ನಿಜವೇ. ಆದರೆ ನನಗಿಂತಲೂ ಸಮೀಪಸ್ಥನಾದ ಬಂಧುವು ಒಬ್ಬನಿದ್ದಾನೆ.
13 Stay tonight. In the morning, if he'll redeem you—good, let him redeem. If not, as our Father lives, I will redeem you. Lie down until morning." ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.
14 She lay at his feet until morning, rose before anyone was recognizable, for he said, "No one may know a woman came to the threshing floor." ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.
15 He said, "Bring the shawl you're wearing; hold it out." She held it out. He measured six portions of barley, put it on her, and went into the city. ಅವನು, “ನಿನ್ನ ಮೇಲ್ಹೊದಿಕೆಯನ್ನು ಹಿಡಿ,” ಎಂದನು. ಅವಳು ಅದನ್ನು ಹಿಡಿದಾಗ ಅವನು ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಅವಳು ಅದನ್ನು ಹೊತ್ತುಕೊಂಡು ಪಟ್ಟಣಕ್ಕೆ ಬಂದಳು.
16 When Ruth came to her mother-in-law, Naomi asked, "How did it go, my daughter?" She told her all the man had done for her. ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು.
17 She said, "He gave me these six measures of barley, saying, 'Don't return to your mother-in-law empty-handed.'" “ ‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು,” ಎಂದಳು.
18 Naomi said, "Wait, my daughter, until you know the outcome, for the man won't rest until he settles it today." ಅದಕ್ಕೆ ನೊವೊಮಿ, “ನನ್ನ ಮಗಳೇ, ಈ ಕಾರ್ಯ ಏನಾಗುವುದೋ, ಎಂದು ನೀನು ತಿಳಿಯುವವರೆಗೂ ಸುಮ್ಮನೆ ಇರು. ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವವರೆಗೂ ವಿಶ್ರಾಂತಿಯಲ್ಲಿ ಇರಲಾರನು,” ಎಂದಳು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]