Skip to content
The Believer's Library

Biblica® Open Kannada Contemporary Version 2022

Ruth 4 OKCV

Show OKCV only
Verse × ×
1 Boaz went up to the town gate and sat. When the family redeemer he'd mentioned came by, Boaz said, "Come sit here, friend." So he came and sat. ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.
2 Then he took ten of the town elders and said, "Sit here." So they sat down. ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು.
3 He told the family redeemer, "Naomi, back from Moab's country, is selling the parcel of land that belonged to our brother Elimelech. ಆಗ ಬೋವಜನು ಆ ವಿಮೋಚಕ ಬಂಧುವಿಗೆ ಹೇಳಿದ್ದೇನೆಂದರೆ, “ಮೋವಾಬ್ ಸೀಮೆಯಿಂದ ತಿರುಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿಬಿಡಬೇಕೆಂದಿರುತ್ತಾಳೆ.
4 So I decided to tell you: buy it before those sitting here and my people's elders. If you'll redeem it, redeem it. If not, tell me so I know, since no one but you can redeem, and I'm after you." He said, "I will redeem it." ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.
5 Boaz said, "The day you buy the field from Naomi, you also acquire Ruth the Moabite, the dead man's widow, to raise up his name on his inheritance." ಆಗ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ತೆಗೆದುಕೊಳ್ಳಬೇಕು,” ಎಂದನು.
6 Then the redeemer said, "I can't redeem it myself, or I'd ruin my own inheritance. You take my right of redemption; I cannot redeem it." ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು.
7 Earlier in Israel, to make any deal for redeeming or exchanging property binding, a man would take off his sandal and give it to the other. This confirmed agreements in Israel. ಬಿಡಿಸಿಕೊಳ್ಳುವುದರಲ್ಲಿಯೂ ಬದಲು ಮಾಡುವುದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಒಂದು ವಾಡಿಕೆಯಿತ್ತು. ಅದು ಕೊಡುವವನು ಕೊಳ್ಳುವವನಿಗೆ ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುತ್ತಿದ್ದನು. ಇದು ಇಸ್ರಾಯೇಲಿನಲ್ಲಿ ವ್ಯವಹಾರವನ್ನು ಕಾನೂನು ಬದ್ಧಗೊಳಿಸುವ ವಿಧಾನವಾಗಿತ್ತು.
8 So when the family redeemer said to Boaz, "Buy it for yourself," he took off his sandal. ಹಾಗೆಯೇ ಆ ಬಂಧುವು ಬೋವಜನಿಗೆ, “ನೀನೇ ನಿನಗೋಸ್ಕರ ಅದನ್ನು ಕೊಂಡುಕೋ,” ಎಂದು ತನ್ನ ಕೆರವನ್ನು ತೆಗೆದುಹಾಕಿದನು.
9 Then Boaz told the elders and all the people, "You are witnesses today that I have bought from Naomi all that belonged to Elimelech, Chilion, and Mahlon. ಆಗ ಬೋವಜನು ಹಿರಿಯರಿಗೂ ಸಮಸ್ತ ಜನರಿಗೂ, “ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬುದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ.
10 I have also taken Ruth the Moabite, Mahlon's widow, as my wife, to preserve the dead man's name with his inheritance, so his name won't vanish from his family or his hometown's records. You are witnesses today." ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.
11 Then all the people at the gate and the elders said, "We are witnesses. May our Father make the woman entering your house like Rachel and Leah, who together built the house of Israel. Prosper in Ephrathah and be famous in Bethlehem. ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.
12 May your house be like Perez's, whom Tamar bore to Judah, through the children our Father gives you by this young woman." ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.
13 So Boaz took Ruth as his wife. He slept with her, and our Father let her conceive, and she gave birth to a son. ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
14 Then the women said to Naomi, "Praise our Father, who has not left you today without a family redeemer—may his name become famous in Israel! ಆಗ ಸ್ತ್ರೀಯರು ನೊವೊಮಿಗೆ, “ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ.
15 He will renew your life and sustain your old age, for your daughter-in-law who loves you, worth more to you than seven sons, has borne him." ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.
16 Then Naomi took the child, held him on her lap, and cared for him. ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
17 The neighbor women named him: "A son is born to Naomi!" They called him Obed, father of Jesse, father of David. ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, “ಒಬ್ಬ ಮಗನು ಹುಟ್ಟಿದ್ದಾನೆ,” ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.
18 Now these are the generations of Perez: Perez fathered Hezron, ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು;
19 Hezron fathered Ram, Ram fathered Amminadab, ಹೆಚ್ರೋನನು ರಾಮನ ತಂದೆಯಾಗಿದ್ದನು; ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು;
20 Amminadab fathered Nahshon, Nahshon fathered Salmon, ಅಮ್ಮೀನಾದಾಬನು ನಹಶೋನನ ತಂದೆಯಾಗಿದ್ದನು; ನಹಶೋನನು ಸಲ್ಮೋನನ ತಂದೆಯಾಗಿದ್ದನು;
21 Salmon fathered Boaz, Boaz fathered Obed, ಸಲ್ಮೋನನು ಬೋವಜನ ತಂದೆಯಾಗಿದ್ದನು; ಬೋವಜನು ಓಬೇದನ ತಂದೆಯಾಗಿದ್ದನು;
22 Obed fathered Jesse, and Jesse fathered David. ಓಬೇದನು ಇಷಯನ ತಂದೆಯಾಗಿದ್ದನು; ಇಷಯನು ದಾವೀದನ ತಂದೆಯಾಗಿದ್ದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]