Skip to content
The Believer's Library

Biblica® Open Kannada Contemporary Version 2022

Titus 3 OKCV

Show OKCV only
Verse × ×
1 Remind them to submit to rulers and authorities, obey, and be ready for every good work, ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.
2 to slander no one, avoid quarreling, be gentle, and show complete consideration to everyone. ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.
3 We too were once foolish, disobedient, deceived, enslaved to various desires and pleasures, living in malice and envy, hated, hating one another. ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.
4 But when the goodness and loving kindness of our Father, our Savior, appeared, ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ,
5 he saved us—not for righteous deeds we did, but by his mercy, through washing of new birth and renewal by the Holy Spirit, ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.
6 whom he poured out on us richly through Jesus Christ our Savior, ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.
7 so that, justified by his grace, we might become heirs in the hope of eternal life. ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.
8 This word is trustworthy: I want you to insist on these things, so that those who trust our Father take care to devote themselves to good works. These things are good and helpful to everyone. ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.
9 But avoid foolish controversies, genealogies, disputes, and quarrels about the law, for they are useless and worthless. ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.
10 Warn a divisive person once, then a second time; after that, have nothing more to do with him, ಭೇದ ಹುಟ್ಟಿಸುವವರನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು. ಅಂಥವರ ಸಹವಾಸ ಮಾಡದಿರು.
11 knowing that such a person is warped and sinful; he stands self-condemned. ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ.
12 When I send Artemas or Tychicus to you, do your best to come to me at Nicopolis, since I've decided to winter there. ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ.
13 Quickly send Zenas the lawyer and Apollos on their way; see they lack nothing. ನಿಯಮ ಪಂಡಿತನಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು. ಅವರಿಗೇನೂ ಕೊರತೆಯಾಗಬಾರದು.
14 Let our people also learn to devote themselves to good works, meeting urgent needs, and not be unproductive. ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.
15 All those with me greet you. Greet those who love us in faith. Grace be with all of you. ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]