Skip to content
The Believer's Library

Biblica® Open Kannada Contemporary Version 2022

Zechariah 10 OKCV

Side by side with the Father's Heart Bible™

ಯೆಹೋವ ದೇವರು ಯೆಹೂದವನ್ನು ಕರುಣಿಸುವನು

1ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ.ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ,ಅವರಿಗೆ ಸಮೃದ್ಧಿಯಾದ ಮಳೆಯನ್ನೂ,ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.

2ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು.ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು.ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ.ವ್ಯರ್ಥವಾಗಿ ಆದರಿಸುತ್ತಾರೆ,ಆದ್ದರಿಂದ ಕುರಿಗಳಂತೆ ಚದರಿದ್ದಾರೆ,ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.

3“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ.ನಾಯಕರನ್ನು ದಂಡಿಸುವೆನು.ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವಯೆಹೂದನ ಮನೆತನದವರನ್ನು ಪರಿಪಾಲಿಸಿ,ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.

4ಆ ಕುಲದಿಂದಲೇ ಮೂಲೆಗಲ್ಲೂ,ಗುಡಾರದ ಮೊಳೆಯೂ,ಯುದ್ಧದ ಬಿಲ್ಲೂ,ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.

5ಅವರು ಯುದ್ಧದಲ್ಲಿಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು.ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು.ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.

6“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು.ಅವರನ್ನು ಕನಿಕರಿಸುವುದರಿಂದಅವರನ್ನು ತಿರುಗಿ ಬರಮಾಡುವೆನು.ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು.ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು,ಅವರಿಗೆ ಉತ್ತರಕೊಡುವೆನು.

7ಎಫ್ರಾಯೀಮಿನವರು ಶೂರರಂತೆ ಇರುವರು.ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು.ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು.ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.

8ನಾನು ಅವರಿಗೆ ಸಿಳ್ಳುಹಾಕಿ,ಅವರನ್ನು ಕೂಡಿಸುವೆನು.ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ.ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.

9ನಾನು ಅವರನ್ನು ಜನಗಳಲ್ಲಿ ಚದುರಿಸಿದರೂದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು.ತಮ್ಮ ಮಕ್ಕಳ ಸಂಗಡ ಬದುಕಿಮತ್ತೆ ತಿರುಗಿಕೊಳ್ಳುವರು.

10ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು.ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು.ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು.ಅವರಿಗೆ ಸ್ಥಳ ಸಾಲದೆ ಇರುವುದು.

11ಅವರು ಕಷ್ಟವೆಂಬ ಕಡಲನ್ನು ದಾಟುವರು.ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು.ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು.ಅಸ್ಸೀರಿಯದ ಗರ್ವವು ತಗ್ಗಿಹೋಗುವುದು.ಈಜಿಪ್ಟಿನ ರಾಜದಂಡವು ಗತಿಸುವುದು.

12ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು.ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,”ಎಂದು ಯೆಹೋವ ದೇವರು ಹೇಳುತ್ತಾರೆ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]